ಜನಜಾಗೃತಿ ಸುದ್ಧಿವಾಹಿನಿ
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಸೋಮವಾರ ಕಾರ್ಕಾಡೂಮಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಸಜ್ಜನ್ ಕುಮಾರ್ ಗೆ ಈಶಾನ್ಯ ದೆಹಲಿಯ ಮಾಂಡೋಲಿ ಜೈಲಿಗೆ ಕರೆದೊಯ್ಯುವಂತೆ ಕೋರ್ಟ್ ನಿರ್ದೇಶನ ನೀಡಿದೆ.
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ವಿಚಾರಣಾಧೀನ ಕೋರ್ಟ್ ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ದೆಹಲಿ ಹೈಕೋರ್ಟ್ ರದ್ದು ಮಾಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು.
ದೆಹಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದರ ವಿಚಾರಣೆ ಬಾಕಿ ಇದೆ. ಸಜ್ಜನ್ ಅವರನ್ನು ಕೋರ್ಟ್ ಮಾಂಡೋಲಿ ಜೈಲಿಗೆ ಕಳುಹಿಸುವಂತೆ ಆದೇಶಿಸಿದೆ.
ಅಷ್ಟೇ ಅಲ್ಲ ಭದ್ರತೆಯ ದೃಷ್ಟಿಯಿಂದ ಪ್ರತ್ಯೇಕ ವಾಹನದಲ್ಲಿ ಅವರನ್ನು ಕರೆದೊಯ್ಯುವಂತೆ ಸೂಚನೆ ನೀಡಿರುವುದಾಗಿ ಸಜ್ಜನ್ ಪರ ವಕೀಲರು ಮಾಧ್ಯಮದವರಿಗೆ ತಿಳಿಸಿದ್ದಾರೆ.
ನಮ್ಮ ಚಾನಲ್ ಗೆ ಭೇಟಿ ನೀಡಿ subscribe ಮಾಡಿ Youtube.com/c/janajagrutiTVNews
ಫೇಸ್ಬುಕ್ ನಲ್ಲಿ ಬೆಂಬಲಿಸಲು ಭೇಟಿ ನೀಡಿ https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/
No comments:
Post a Comment