Tuesday, January 15, 2019

ರಾಜ್ಯ ಸರ್ಕಾರದಿಂದ ರೈತರಿಗೆ `ಸಂಕ್ರಾಂತಿ ಉಡುಗೊರೆ' : 1.7 ಲಕ್ಷ ಸಾಲ ಖಾತೆಗಳಿಗೆ 876 ಕೋಟಿ ರೂ. ಬಿಡುಗಡೆ

ಜನಜಾಗೃತಿ ಸುದ್ಧಿವಾಹಿನಿ

     15 jan 2019


ಬೆಂಗಳೂರು: ರಾಜ್ಯ ಸರ್ಕಾರವು ರೈತರಿಗೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಿದ್ದು, 1.1 ಲಕ್ಷ ಸಹಕಾರಿ ಬ್ಯಾಂಕುಗಳ ಸಾಲದ ಖಾತೆಗಳಿಗೆ 616 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿನ 58 ಸಾವಿರ ಸಾಲದ ಖಾತೆಗಳಿಗೆ 260 ಕೋಟಿ ರೂ.ಗಳ ಬೆಳೆ ಸಾಲ ಮನ್ನಾದ ಮೊತ್ತ ಬಿಡುಗಡೆ ಮಾಡಲಾಗಿದೆ.

ಈ ಎರಡೂ ಬ್ಯಾಂಕುಗಳಲ್ಲಿ ಒಟ್ಟು 1.7 ಲಕ್ಷ ಸಾಲ ಖಾತೆಗಳಿಗೆ 876 ಕೋಟಿ ರೂ. ಗಳಷ್ಟು ಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಿದಂತಾಗಿದೆ. ಜನವರಿ 11 ರ ವರೆಗೆ ಒಟ್ಟು 10 ಲಕ್ಷಕ್ಕೂ ಹೆಚ್ಚು ರೈತರು ಸಾಲ ಮನ್ನಾ ಯೋಜನೆಗಾಗಿ ಅರ್ಹತೆ ಹೊಂದಿದ್ದು, ಸಹಕಾರಿ ಬ್ಯಾಂಕುಗಳ ಹಾಗೂ ವಾಣಿಜ್ಯ ಬ್ಯಾಂಕುಗಳ ಸಾಲ ಖಾತೆಗಳ ಜಿಲ್ಲಾವಾರು ವಿವರ ನೀಡಲಾಗಿದೆ.

ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಾಲದ ಖಾತೆಗಳಿಗೆ ಮನ್ನಾ ಮೊತ್ತವನ್ನು ನಿಯಮಿತವಾಗಿ ಪಾವತಿಸಲಾಗುತ್ತಿದೆ.

ಸಹಕಾರಿ ಬ್ಯಾಂಕುಗಳಲ್ಲಿ ಸಾಲವನ್ನು ತೀರಿಸುವ ವಾಯಿದೆ ಮುಗಿದ ನಂತರ ಮನ್ನಾ ಮೊತ್ತ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA

No comments:

Post a Comment