ಜನಜಾಗೃತಿ ಸುದ್ಧಿವಾಹಿನಿ
ಬೆಂಗಳೂರು,: ಜ.21: "ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದು:ಖತಪ್ತ ಮನಸ್ಸಿನಿಂದ ಪ್ರಾರ್ಥಿಸುತ್ತೇನೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
"ನಾವು ಯಾರೂ ಬಸವಣ್ಣನವರನ್ನು ಕಣ್ಣಾರೆ ನೋಡಿಲ್ಲ, ನಾನು ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಲ್ಲಿ ಬಸವಣ್ಣನನ್ನು ಕಾಣುತ್ತಿದ್ದೆ. ಅವರನ್ನು ನಡೆದಾಡುವ ದೇವರು ಎನ್ನುತ್ತಾರೆ. ನನ್ನ ಪಾಲಿಗೆ ಅವರು ‘ನಡೆದಾಡುತ್ತಿದ್ದ ಬಸವಣ್ಣ’ ಆಗಿದ್ದರು".
"ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ಭಯ ನಿಜವಾಗಿದೆ. ಸಾಧನೆಯ ಮೂಲಕ ಲೋಕವನ್ನೇ ಗೆದ್ದಿರುವ ಸ್ವಾಮಿಗಳು ಕೊನೆಗೂ ಸಾವನ್ನು ಗೆಲ್ಲಲಾಗದೆ ಶರಣಾಗಿ ನಮ್ಮನ್ನು ಅನಾಥರಾಗಿಸಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
No comments:
Post a Comment