Wednesday, January 23, 2019

ಕೈ’ ಮುನ್ನೆಲೆಗೆ ಪ್ರಿಯಾಂಕಾ; ಅನಿರೀಕ್ಷಿತ ನಿರ್ಧಾರ ಪ್ರಕಟಿಸಿದ ಕಾಂಗ್ರೆಸ್‌✋🏻

ಜನಜಾಗೃತಿ ಸುದ್ಧಿವಾಹಿನಿ

ನವದೆಹಲಿ: ಹಲವು ವರ್ಷಗಳ ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್‌ ಪಕ್ಷವು, ನೆಹರೂ–ಗಾಂಧಿ ಕುಟುಂಬದ ಇನ್ನೊಂದು ಕುಡಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಖ್ಯವಾಹಿನಿ ರಾಜಕಾರಣಕ್ಕೆ ಕರೆ ತಂದಿದೆ.


ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು ಉತ್ತರ ಪ್ರದೇಶದ ಪೂರ್ವದ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ಈ ಮೂಲಕ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆ ರಾಜ್ಯದಲ್ಲಿ ಭಾರಿ ಸ್ಪರ್ಧೆ ಒಡ್ಡುವ ಇಂಗಿತ ವ್ಯಕ್ತಪಡಿಸಿದೆ. 


ಪ್ರಿಯಾಂಕಾ (47) ಅವರು ಫೆಬ್ರುವರಿ ಮೊದಲ ವಾರದಲ್ಲಿ ಹೊಸ ಹೊಣೆಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ.


ಮುಂದಿನ ಲೋಕಸಭಾ ಚುನಾವಣೆಗೆ ಕೆಲವೇ ವಾರಗಳಿರುವ ಈ ಸಂದರ್ಭದಲ್ಲಿ ಪ್ರಿಯಾಂಕಾ ಅವರ ನೇಮಕ ಭಾರಿ ಕಾರ್ಯತಂತ್ರ ಎಂದೇ ವಿಶ್ಲೇಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಪ್ರಭಾವ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಲೇ ಇದೆ. ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿಯಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡದಿರುವುದು ಆ ಪಕ್ಷದ ಪರಿಸ್ಥಿತಿಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಈ ಎಲ್ಲದರಿಂದ ಬಿಡಿಸಿಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವುದು ಪ್ರಿಯಾಂಕಾ ಅವರಿಗೆ ಸಾಧ್ಯವಾಗ

ಬಹುದು ಎನ್ನಲಾಗುತ್ತಿದೆ. 

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/UQjfgO_t0g0

No comments:

Post a Comment