ಜನಜಾಗೃತಿ ಸುದ್ಧಿವಾಹಿನಿ
16 jan 2019
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರವನ್ನು ಉರುಳಿಸಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನಲಾಗಿದ್ದು, ಆದರೆ ಒಂದು ವರ್ಗ ಮಾತ್ರ ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆಯಂತೆ.
ಬಿಜೆಪಿಯ ಆಪರೇಷನ್ ಕಮಲ ಸಕ್ಸಸ್ ಆದ್ರೂ ಬಿಜೆಪಿಗೆ ಸಂಕಷ್ಟ ಎದುರಾಗಲಿದೆ ಎಂದು ಒಂದು ವರ್ಗ ಬಿಜೆಪಿ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ರವಾನಿಸಿದೆ. ಏಕೆಂದರೆ 2018 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡಿದ್ದರು. ಚುನಾವಣೆಯಲ್ಲಿ ಒಕ್ಕಲಿಗರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದರು ಎಂದು ಹೇಳಲಾಗುತ್ತೆ, ಹಾಗಾಗಿ ಕಾಂಗ್ರೆಸ್ ಸೋಲಲು ಕಾರಣ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಅವರು ಹೆಚ್.ಡಿಡಿ-ಹೆಚ್.ಡಿಕೆ ಅವರನ್ನು ಟಾರ್ಗೆಟ್ ಮಾಡಿದ್ದರಿಂದಲೇ ಒಕ್ಕಲಿಗರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲುನುಭವಿಸಿತ್ತು. ಈಗ ಬಿಜೆಪಿ ಸರ್ಕಾರವನ್ನು ಉರುಳಿಸಿದರೆ ಒಕ್ಕಲಿಗರ ಕೋಪ ಬಿಜೆಪಿ ಕಡೆಗೆ ತಿರುಗಬಹುದು ಎನ್ನಲಾಗಿದ್ದು, ಈ ಕುರಿತು ಒಂದು ವರ್ಗ ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆ ಸಂದೇಶ ರವಾನಿಸಿದೆ ಎನ್ನಲಾಗಿದೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು ಭಾಗಗಳಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಬಿಜೆಪಿ ಸರ್ಕಾರ ಉರುಳಿಸಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಐದರಿಂದ ಆರು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಬಹುದು ಎನ್ನಲಾಗುತ್ತಿದೆ.
ನಮ್ಮ ಸುದ್ಧಿ ಗಳನ್ನ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ವೀಕ್ಷಿಸಿ https://youtu.be/ujlXO-HUsaM
No comments:
Post a Comment