Saturday, January 5, 2019

ಭಾರತ್ ಬಂದ್

     ಜನಜಾಗೃತಿ ಸುದ್ಧಿವಾಹಿನಿ


ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!


ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದೆ.


ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟಿದ್ದು, 12 ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಬೀದಿಗಿಳಿಯಲಿವೆ. ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ ಗಳು ಸ್ತಬ್ಧವಾಗಲಿದೆ ಅಂತ ಸಿಐಟಿಯು ಉಪಾಧ್ಯಕ್ಷ ಅನಂತ್ ಸುಬ್ಬರಾವ್ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಮಂಗಳವಾರ ಬೆಳಗ್ಗೆ ಆರು ಗಂಟೆಯಿಂದ ಬುಧವಾರ ಸಂಜೆ ಐದು ಗಂಟೆಯವರೆಗೂ ಬಂದ್ ನಡೆಯಲಿದ್ದು, ಈಗಾಗಲೇ ಮೋದಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವೂ ಬೆಂಬಲ ಕೊಟ್ಟಿದೆ ಎಂದು ತಿಳಿದುಬಂದಿದೆ.


ಬಂದ್ ಯಾಕೆ?:

ಮೋಟಾರು ವಾಹನ ತಿದ್ದುಪಡಿ ಮಸೂದೆ -2017ರನ್ನು ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಬಂದ್‍ಗೆ ಕರೆ ಮಾಡಲಾಗಿದೆ.


ಬಂದ್ ದಿನ ಏನಿರಲ್ಲ:

ಮಂಗಳವಾರ ಮತ್ತು ಬುಧವಾರ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಇರಲ್ಲ. ಆಟೋ ಸಂಘಟನೆಯಿಂದ ಬೆಂಬಲ ಇರುವುದರಿಂದ ಆಟೋ ಕೂಡ ಸಿಗಲ್ಲ. ಇತ್ತ ಓಲಾ ಮತ್ತು ಊಬರ್ ಕ್ಯಾಬ್‍ಗಳು ಸಿಗುವುದಿಲ್ಲ. ಮುಷ್ಕರದಲ್ಲಿ ಬ್ಯಾಂಕ್ ನೌಕರರು ಕೂಡ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯವಾಗುವ ಸಾಧ್ಯತೆಗಳು ಇವೆ. ಎಪಿಎಂಸಿ ಲಾರಿ ಸಿಬ್ಬಂದಿ ಪಾಲ್ಗೊಳ್ಳುವುದರಿಂದ ಎಪಿಎಂಸಿ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ.


ಏನಿರುತ್ತೆ?:

ಆಸ್ಪತ್ರೆಗಳು, ಮೆಡಿಕಲ್ ಶಾಪ್, ಅಂಗಡಿ ಮುಂಗಟ್ಟುಗಳು ಇರುತ್ತದೆ. ಜೊತೆಗೆ ಅಂಬುಲೆನ್ಸ್ ಸೇವೆ, ಮೆಟ್ರೋ ಮತ್ತು ರೈಲು ಸೇವೆ ಇರಲಿದೆ.


50- 50 ಬೆಂಬಲ:

ನಿರ್ಧಾರ ಪ್ರಕಟಿಸದ ಹೋಟೆಲ್ ಮಾಲೀಕರು ನೈತಿಕ ಬೆಂಬಲದ ಘೋಷಣೆ ಮಾಡಿದ್ದು, ಚಿತ್ರೋದ್ಯಮದ ನೈತಿಕ ಬೆಂಬಲ, ಚಿತ್ರ ಪ್ರದರ್ಶನ ಬಂದ್ ಮಾಡುವ ಬಗ್ಗೆ ಯಾವುದೇ ಫೋಷಣೆ ಮಾಡಿಲ್ಲ. ಇನ್ನೂ ಶಾಲಾ ಕಾಲೇಜುಗಳ ವಾಹನಗಳು ಸ್ತಬ್ಧವಾಗುವುದರಿಂದ ಆಯಾಯ ಜಿಲ್ಲಾಧಿಕಾರಿಗಳು ಶಾಲಾ -ಕಾಲೇಜು ಬಂದ್ ನಿರ್ಣಯ ಕೈಗೊಳ್ಳಲಿದ್ದಾರೆ.

ನಮ್ಮ ಚಾನಲ್ ಗೆ ಭೇಟಿ ನೀಡಿ Youtube.com/c/janajagrutiTVNews

No comments:

Post a Comment