ಜನಜಾಗೃತಿ ಸುದ್ಧಿವಾಹಿನಿ
15 jan 2019
ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಕ್ಷ ತೊರೆದು ಹೋಗುವವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ತಾಕತ್ತು ನಮಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದರು.
ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು. ಯಾರೂ ಕೂಡಾ ಬಿಜೆಪಿಯೊಂದಿಗೆ ಹೋಗಿಲ್ಲ. ಆನಂದ್ ಸಿಂಗ್ ಕೂಡ ನಮ್ಮೊಂದಿಗೇ ಇದ್ದಾರೆ.
ಸುಖಾಸುಮ್ಮನೆ ಸುಳ್ಳು ಸುದ್ದಿಗಳನ್ನು ಬಿಜೆಪಿ ಪ್ರಚುರಪಡಿಸುತ್ತಿದೆ ಎಂದು ಹೇಳಿದರು.
ಒಂದು ವೇಳೆ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಅವರನ್ನು ಮತ್ತೆ ಕರೆತರುವ ತಾಕತ್ತು ನಮಗಿದೆ ಎಂದರು.
ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ : ಕೈ ಅತೃಪ್ತರ ಭಿನ್ನಮತೀಯ ಚಟುವಟಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಪವರ್ ಪುಲ್ ನಾಯಕ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಮತ ಉಂಟಾಗಿದೆ.
'ಬಿಜೆಪಿ ಬಗ್ಗೆ ಸಿಎಂ ಕುಮಾರಸ್ವಾಮಿ ಸಹಾನುಭೂತಿ ಹೊಂದಿದ್ದಾರೆ' ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಮೊದಲ ಬಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
'ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಅಪರೇಶನ್ ಬಗ್ಗೆ ಸಿಎಂಗೆ ಮಾಹಿತಿ ಇದೆ. ಶಾಸಕರಿಗೆ ಆಮಿಷವೊಡ್ಡುತ್ತಿರುವ ಬಗ್ಗೆಯೂ ಸಿಎಂ ಕುಮಾರಸ್ವಾಮಿಗೆ ನಿಖರ ಮಾಹಿತಿ ಇದೆ. ಸ್ವತಃ ಶಾಸಕರೇ ತಮಗೆ ಆಮಿಷವೊಡ್ಡುತ್ತಿರುವ ಬಗ್ಗೆ ಸಿಎಂಗೆ ಮಾಹಿತಿ ಕೊಟ್ಟಿದ್ದಾರೆ. ನಾನಾಗಿದ್ದರೆ 24 ಗಂಟೆಗಳಲ್ಲಿ ಎಲ್ಲವನ್ನೂ ಬಯಲು ಮಾಡ್ತಿದ್ದೆ' ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA
No comments:
Post a Comment