Friday, February 15, 2019

ನಮ್ಮನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ: ಪಾಕಿಸ್ತಾನಕ್ಕೆ ಎಚ್ಚರಿಕೆ ರವಾನಿಸಿದ ಪ್ರಧಾನಿ

ಜನಜಾಗೃತಿ ಸುದ್ಧಿವಾಹಿನಿ

ಯೋಧರನ್ನು ಹತ್ಯೆ ಮಾಡಿ ತಪ್ಪು ಮಾಡಿದ್ದೀರಿ


ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದರೆ ಅದನ್ನು ಮರೆತು ಬಿಡಲಿ ಅದು ಸಾಧ್ಯವಿಲ್ಲ ಎಂದು  ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.ಯೋಧರ ಮೇಲೆ ದಾಳಿ ನಡೆಸಿ ಉಗ್ರರು ಭಾರೀ ದೊಡ್ಡ ತಪ್ಪು ಮಾಡಿದ್ದಾರೆ, ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ ಇಂತಹ ಕೃತ್ಯಗಳಿಂದ ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.


ದೆಹಲಿಯಿಂದ ವಾರಣಾಸಿಗೆ ಸಂಚರಿಸುವ ಹೊಸ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಮೋದಿಯವರು ರೈಲಿಗೆ ಚಾಲನೆ ನೀಡುವುದಕ್ಕೆ ಮುನ್ನ ನೆರೆದಿದ್ದ ಗಣ್ಯರು ನಿನ್ನೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಿದರು.ಇದೊಂದು ಭಾವನಾತ್ಮಕ ಮತ್ತು ಸೂಕ್ಷ್ಮ ಸಮಯ. ಆಡಳಿತದಲ್ಲಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಈ ಸಂದರ್ಭದಲ್ಲಿ ನಾವು ರಾಜಕೀಯದಿಂದ ದೂರವುಳಿಯಬೇಕು. ದೇಶದ ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/sPi9H6mM2hE 


No comments:

Post a Comment